Tag Archives: Anganwadi

ಬೆಂಗಳೂರಿನಲ್ಲಿ 250 ಕ್ಕೂ ಹೆಚ್ಚು Anganwadi ಹುದ್ದೆಗಳಿಗೆ ಅರ್ಜಿ ಆಹ್ವಾನ

bangalore wcd recruitment

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ, ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಾದ್ಯಂತ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು, ಪ್ರೇರಣೆಯುತ ಮತ್ತು ಸೇವಾಭಿಮಾನಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.

bangalore wcd recruitment

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಕೇವಲ ಉದ್ಯೋಗವಲ್ಲ, ಬದಲಾವಣೆಗೆ ಪ್ರೇರಕವಾಗುವ ಒಂದು ಅವಕಾಶವನ್ನೂ ನೀಡುತ್ತವೆ. ಸಮಾಜ ಸೇವೆಯಲ್ಲಿ ತೊಡಗಲು ಮನಸ್ಸಿದೆವೆಂದರೆ, ಇದನ್ನು ತಪ್ಪಿಸಬೇಡಿ!

ಸ್ವಾಭಿಮಾನಿ ಜೀವನದತ್ತ ಮುನ್ನಡೆಯಲು ಇದು ನಿಮ್ಮ ಮೊದಲ ಹೆಜ್ಜೆ ಆಗಬಹುದು! ಆಸಕ್ತರಾದ ಮಹಿಳಾ ಅಭ್ಯರ್ಥಿಗಳು, ಈ ಅವಕಾಶವನ್ನು ಬಳಸಿಕೊಳ್ಳಿ ಮತ್ತು ನಿಮ್ಮ ಸೇವೆಯ ಮೂಲಕ ಸಮಾಜಕ್ಕೆ ಹೊಸ ಬೆಳಕನ್ನು ನೀಡಿರಿ.

ಹುದ್ದೆಯ ವಿವರ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು

ಖಾಲಿ ಹುದ್ದೆಗಳ ಸಂಖ್ಯೆ : ಒಟ್ಟು 288 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ತಾಲೂಕುಗಳುಕಾರ್ಯಕರ್ತೆಸಹಾಯಕಿ
ದೇವನಹಳ್ಳಿ1042
ದೊಡ್ಡಬಳ್ಳಾಪುರ1365
ಹೊಸಕೋಟೆ1466
ನೆಲಮಂಗಲ1563

ಕರ್ತವ್ಯದ ಸ್ಥಳ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಗಳು :
• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿಯನ್ನು ತೇರ್ಗಡೆ ಯಾಗಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಇಲ್ಲವೇ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 19 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ವಿಕಲಚೇತನರಿಗೆ 10 ವರ್ಷ ವಯೋಮಿತಿಯನ್ನು ಸಡಿಲಿಕೆ ನೀಡಲಾಗಿದೆ.

ಆಯ್ಕೆಯ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ನ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಮೊದಲನೇ ಹಂತ : ಆನ್‌ಲೈನ್‌ ನ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಮತ್ತು ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅನಂತರ ಅರ್ಜಿಯನ್ನು ಸಲ್ಲಿಸಬೇಕು.
ಏರಡನೇ ಹಂತ : ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಇಲ್ಲವೇ ಈ ಕೆಳಗಡೆ ನೀಡಲಾದ ಅಪ್ಲೈ ಲಿಂಕ್ ನ ಕ್ಲಿಕ್ ಮಾಡಿ ಅಪ್ಲಿಕೇಷನ್ ಅನ್ನು ಸಲ್ಲಿಬಹುದಾಗಿದೆ.
ಮೂರನೇ ಹಂತ : ಇಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾ: ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಯನ್ನು ಸರಿಯಾಗಿ ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಮತ್ತೊಮ್ಮೆ ಪರಿಶೀಲಿಸುವುದು.

ನಾಲ್ಕನೇ ಹಂತ : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ ಅಥವಾ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದಲ್ಲಿ, ಅವುಗಳನ್ನು ಸ್ಕ್ಯಾನ್ ಮಾಡುವ ಮೂಲಕ ಅಪ್ಲೋಡ್ ಮಾಡುವುದು (ಅಗತ್ಯವಿದ್ದರೆ ಮಾತ್ರ) ಹೀಗೆ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಆನ್‌ಲೈನ್‌ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :
• ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ.
• ನಿಗದಿತವಾದ ವಿದ್ಯಾರ್ಹತೆಯ ಅಂಕಪಟ್ಟಿ.
• ತಹಶೀಲ್ದಾರರು ಇಲ್ಲವೇ ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳದ ದೃಢೀಕರಣ ಪತ್ರ.
• ಅಭ್ಯರ್ಥಿಗಳ ಜಾತಿಯ ಪ್ರಮಾಣ ಪತ್ರ.
• ಪತಿಯ ಮರಣದ ಪ್ರಮಾಣ ಪತ್ರ ಇಲ್ಲವೇ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಇಲ್ಲಿ ಪರಿಗಣಿಸುವಂತಿಲ್ಲ)
• ಅಂಗವಿಕಲತೆಯ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
• ವಿಚ್ಛೇದ ಹೊಂದಿದಲ್ಲಿ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)

ಅರ್ಜಿ ಶುಲ್ಕದ ವಿವರ : ಯಾವುದೇ ರೀತಿಯ ಅರ್ಜಿ ಶುಲ್ಕವು ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 25, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 30, 2025

ಅಧಿಕೃತ ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here
ಅಧಿಕೃತ ವೆಬ್ ಸೈಟ್Click Here