ಹಲೋ ಸ್ನೇಹಿತರೇ ನಮ್ಮ ಈ ಲೇಖನಕ್ಕೆ ಸ್ವಾಗತ, ರಾಜ್ಯದಲ್ಲಿ ಈವರೆಗೂ 7.9 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮೆಯಾಗಿಲ್ಲ. ಅಂತವರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ಸಿಹಿ ಸುದ್ದಿಯನ್ನು ನೀಡಿದ್ದಾರೆ ಅಂತಹ ಸಿಹಿ ಸುದ್ದಿ ಏನೆಂದು ತಿಳಿಯಲು ನಮ್ಮ ಈ ಲೇಖನವನ್ನು ಸ್ವಲ್ಪನೂ ಮಿಸ್ ಮಾಡದೆ ಕೊನೆಯವರೆಗೂ ಓದಿ.

ಗೃಹಲಕ್ಷ್ಮಿ ಯೋಜನೆಯಡಿ 7.9 ಲಕ್ಷ ಮಹಿಳೆಯರಿಗೆ ಹಣ ಪಾವತಿ ಬಾಕಿ ಇದೆ. ತಾಂತ್ರಿಕ ಸಮಸ್ಯೆ ಸರಿಪಡಿಸಿ ಆಯಾ ಫಲಾನುಭವಿಗಳ ಖಾತೆಗೆ ಬಾಕಿ ತಿಂಗಳ ಮೊತ್ತವು ಸೇರಿಸಿ ಇನ್ನು 15 ದಿನಗಳೊಳಗೆ ಸಹಾಯಧನ ಪಾವತಿ ಮಾಡಲಾಗುತ್ತದೆ ಎಂದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಹಾಗೂ ಬುಧವಾರ ಬೆಂಗಳೂರಿನ ಮಲ್ಲೇಶ್ವರದ ಬಿಡಬ್ಲ್ಯುಎಸ್ಎಸ್ ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತರಬೇತಿ ಕುರಿತು ಸಚಿವರು ಮಾಹಿತಿ ಪಡೆದುಕೊಂಡರು. ಗೃಹಲಕ್ಷ್ಮಿ ಯೋಜನೆ ಕುರಿತು ಆಗಿರುವ ತಾಂತ್ರಿಕ ದೋಷಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಸಿಡಿಪಿಒಗಳಿಗೆ ಸೂಚನೆ ನೀಡಿದರು. ತಾಂತ್ರಿಕ ದೋಷ, ಸಿಬ್ಬಂದಿಗಳ ತೊಡಕಿನ ಕುರಿತು ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಸಚಿವೆ, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆ ಇದುವರೆಗೂ ಶೇಕಡ 95 ರಷ್ಟು ಯಶಸ್ವಿಯಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಒಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಶೇಕಡ 95 ರಷ್ಟು ಮಹಿಳೆಯರಿಗೆ ಹಣ ಸಂದಾಯ ಯಶಸ್ವಿ
ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ 1,16, 65,000 ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರ ಆಕೌಂಟ್ ಗೆ – 2,119 ಕೋಟಿ ಹಣ ಹಾಕಲಾಗಿದ್ದು, ಈ ಮೂಲಕ ಶೇಕಡ 97ರಷ್ಟು ಡಿಬಿಟಿ ಮುಖಾಂತರ ಹಣ ಹಾಕಲಾಗಿದೆ ಎಂದು ಸಚಿವರು ವಿವರಿಸಿದರು. ಆಗಸ್ಟ್ ತಿಂಗಳಲ್ಲಿ ಐದು ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಹಣ ಹೋಗಿಲ್ಲ. ಸೆಪ್ಟೆಂಬರ್ ನಲ್ಲಿ ಶೇ.82 ಕುಟುಂಬಗಳಿಗೆ ಹಣ ಹಾಕಲಾಗಿದ್ದು 12 ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಅಥವಾ ಕೆವೈಸಿ ಸಮಸ್ಯೆಯಿಂದ ಹಣ ಬ್ಯಾಂಕ್ ಆಕೌಂಟ್ ನಲ್ಲಿ ಉಳಿದಿದೆ. ಇನ್ನು ಅಕ್ಟೋಬರ್ ನಲ್ಲಿ 2400 ಕೋಟಿ ರೂ ಬಿಡುಗಡೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
3 ತಿಂಗಳಿಂದ ಬಾಕಿ ಇದ್ದರೆ 6 ಸಾವಿರ ರೂ. ಖಾತೆಗೆ ಬರುತ್ತೆ
ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ರೆ, ಒಟ್ಟಿಗೆ ಮೂರು ತಿಂಗಳ ಹಣ ಹಾಕಲಾಗುತ್ತದೆ. ಇದುವರೆಗೆ ಹಣ ಬಾರದೇ ಇದ್ರೂ ಪೂರ್ಣ ಬಾಕಿ ಹಣ ಹಾಕಲಾಗುವುದು ಎಂದರು. ದೀಪಾವಳಿ ಹಬ್ಬದ ವೇಳೆಗೆ ಅಥವಾ ಮುಂದಿನ 15 ದಿನಗಳೊಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು ಎಂದರು.ಹೀಗಾಗಿ ಅಧಿಕಾರಿಗಳಿಗೆ ಟ್ರೈನಿಂಗ್ ನೀಡಲಾಗುತ್ತಿದ್ದು, ಇನ್ನು ಹತ್ತು ದಿನದಲ್ಲಿ ಗೃಹಲಕ್ಷ್ಮಿ ಗೊಂದಲ ಕ್ಲಿಯರ್ ಆಗಲಿದೆ ಎಂದು ತಿಳಿಸಿದರು. ಇದರ ಜೊತೆಗೆ ‘1902’ ಹೆಲ್ಪ್ ಲೈನ್ ನಂಬರ್ ಇದ್ದು, ಇದಕ್ಕೆ ಕೆರೆಮಾಡಿ ಮಹಿಳೆಯರು ಮಾಹಿತಿಯನ್ನ ಪಡೆದುಕೊಳ್ಳಬಹುದು ಹೇಳಿದ್ದಾರೆ.
ಇತರೆ ವಿಷಯಗಳು
- ಹೊಸ ಪಡಿತರ ಚೀಟಿ: ಸಚಿವ ಕೆ.ಎಚ್ ಮುನಿಯಪ್ಪ ಮಹತ್ವದ ಸುದ್ದಿಘೋಷ್ಠಿ
- Railway New Rule: ನಿಮ್ಮ ಸೀಟಿನಲ್ಲಿ ಅಕ್ರಮವಾಗಿ ಬೇರೊಬ್ಬರು ಕುಳಿತುಕೊಂಡಿದ್ದರೆ ಏನುಮಾಡಬೇಕು