ಹಲೋ ಸ್ನೇಹಿತರೇ ನಮ್ಮ ಈ ಲೇಖನಕ್ಕೆ ಸ್ವಾಗತ, ಬಿ ಜೆ ಪಿ ಇಷ್ಟು ದಿನಗಳ ಕಾಲ ರಾಜ್ಯಾಧ್ಯಕ್ಷರನ್ನಾಗಿ ಯಾರನ್ನು ಆಯ್ಕೆ ಮಾಡದೆ ಸ್ಥಾನ ಕಾಲಿಯಲ್ಲಿ ಉಳಿದಿತ್ತು, ಆದರೆ ದೀಪಾವಳಿಯ ಸಂದರ್ಭದಲ್ಲಿ ಒಂದು ಉಡುಗೊರೆಯನ್ನು ನೀಡಿದಂತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಅದು ಯಾರೂ ಮತ್ತು ಹೇಗೆ ಎಂದು ತಿಳಿಯಲು ನಮ್ಮ ಈ ಲೇಖನವನ್ನು ಸ್ವಲ್ಪನೂ ಮಿಸ್ ಮಾಡದೆ ಕೊನೆಯವರೆಗೂ ಓದಿ.

BJP ಅಧ್ಯಕ್ಷ ಸ್ಥಾನಕ್ಕೆ ಹಲವಾರು ಜನರ ಹೆಸರು ಕೂಡ ಬರುತ್ತಿದ್ದವು ಆದರೆ ಯಡಿಯೂರಪ್ಪನವರ ಮಗನಾದ ವಿಜಯೇಂದ್ರ ಅವರನ್ನು ಈ ಸ್ಥಾನಕ್ಕೆ ಏರಿಸಿರುವುದು ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ನೇಮಕಗೊಳಿಸಿದ ಆದೇಶ ಪ್ರಕಟಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ ಆಗಿರುವ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ.
ಯಾವ ಕಾರಣಕ್ಕೆ ಬಿವೈ ವಿಜಯೇಂದ್ರ ರವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಆಯ್ಕೆ :
ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಆಯ್ಕೆಯಾದ ನಂತರ ಪ್ರತಿಕ್ರಿಯೆಸಿದ ಇವರು ಮಾಜಿ ಮುಖ್ಯಮಂತ್ರಿಯ ಮಗ ಎಂಬ ಕಾರಣಕ್ಕೆ ಈ ಸ್ಥಾನ ಕೊಟ್ಟಿಲ್ಲ, ಆದರೆ ನನಗೆ ಯಡಿಯೂರಪ್ಪನವರ ಮಗ ಎಂಬುವ ಹೆಮ್ಮೆಯಿದೆ ಪಕ್ಷ ಬಿಡುವ ಯೋಚನೆಯಲ್ಲಿ ಇರುವವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಮಾತನಾಡಿ ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರದ ವೀಕ್ಷಕರು ಕೂಡ ಆಗಮಿಸುತ್ತಿದ್ದಾರೆ, ಅವರ ಸಮ್ಮುಖದಲ್ಲೇ ಪ್ರತಿ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆಯಾಗಲಿದೆ ಎಂದು ತಿಳಿಸಿದರು.
ಇತರೆ ವಿಷಯಗಳು
- Gold And Silver Deepawali Festival Dhamaka: ಭಾರೀ ಇಳಿಕೆ ಕಂಡ ಚಿನ್ನ ಮತ್ತು ಬೆಳ್ಳಿಯ ಬೆಲೆ
- ದನದ ಕೊಟ್ಟಿಗೆ ನಿರ್ಮಾಣಕ್ಕೆ ಸರ್ಕಾರದಿಂದ ಉಚಿತ ಹಣ: ಮೂರು ಪ್ರಾಣಿಗಳಿಗೆ 80,000 ಆರು ಪ್ರಾಣಿಗಳಿಗೆ 160,000